ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ ನಿಧನ- ಶಾಸಕ ಯಶವಂತರಾಯಗೌಡ ಪಾಟೀಲ ಸಂತಾಪ ಸೂಚಿಸಿದರು.
ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ ನಿಧನ- ಶಾಸಕ ಯಶವಂತರಾಯಗೌಡ ಪಾಟೀಲ ಸಂತಾಪ ಸೂಚಿಸಿದರು.
ಇಂಡಿ- ಕಾಂಗ್ರೆಸ್ ಹಿರಿಯ ಶಾಸಕ ರಾಜಕೀಯ ನೇತಾರ ಶಾಮನೂರ ಶಿವಶಂಕರಪ್ಪನವರ ನಿಧನ ಸುದ್ದಿ ತಿಳಿದು ಮನಸ್ಸಿಗೆ ಅಘಾತವಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಾಮನೂರ ಶಿವಶಂಕರಪ್ಪನವರು ಅತ್ಯೆಂತ ಹಿರಿಯ ರಾಜಕಾರಣಿಗಳು ಹಾಗೂ ಪಕ್ಷದ ಮಾರ್ಗದರ್ಶಕರು ಇವರು ೬ ಬಾರಿ ಶಾಸಕರಾಗಿ ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದಾರೆ. ದಾವಣಗೇರಿ ದಕ್ಷಿಣ ಕ್ಷೇತ್ರದ ಶಾಸಕರಾಗಿ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು. ವಿವಿಧ ಸರಕಾರಿ ಪ್ರಮುಖ ಖಾತೆಗಳನ್ನು ನಿಭಾಯಿಸುವ ಮೂಲಕ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ಈ ಹಿಂದೆ ಅತೀವೃಷ್ಠಿಯಾಗಿ ರೈತರ ತೋಟಗಾರಿಕೆ ಬೆಳೆಗಳು ಹಾನಿಯಾಗಿರುವಾಗ ನನ್ನ ಮತಕ್ಷೇತ್ರಕ್ಕೆ ಖುದ್ದಾಗಿ ಬಂದು ರೈತರ ಜಮೀನುಗಳಲ್ಲಿ ಬೆಳೆದ ಲಿಂಬೆ, ದಾಳಿಂಬೆ, ದ್ರಾಕ್ಷಿ, ಬಾಳೆ,ಪಪ್ಪಾಯಿ ಇತರೆ ತೋಟಗಾರಿಕೆ ಬೆಳೆಗಳು ನಾಶವಾಗಿರುವುದನ್ನು ಕಣ್ಣಾರೆ ಕಂಡು ರೈತರಿಗೆ ಆತ್ಮಸ್ಥೆರ್ಯ ತುಂಬಿದರು. ಇಷ್ಟೇ ಅಲ್ಲದೆ ವೈಯಕ್ತಿಕ ನನ್ನ ರಾಜಕೀಯ ಜೀವನದಲ್ಲಿ ಮಾರ್ಗದರ್ಶಕರು ಆಗಿದ್ದರು. ನೇರ, ನಡೆ- ನುಡಿಯುಳ್ಳ ರಾಜಕೀಯ ನಾಯಕರು ಇಂತಹವರು ಸಿಗುವುದು ಅಪರೂಪ ಇವರ ಅಗಲಿಕೆಯಿಂದ ಪಕ್ಷಕ್ಕೆ ತುಂಬಲಾರದ ನಷ್ಟಾಗಿದೆ ಎಂದ, ಅವರು ಭಗವಂತ ಅವರ ಕುಟುಂಬಕ್ಕೆ ಹಾಗೂ ಬಂಧು -ಬಾಂಧವರಿಗೆ ಮತ್ತು ಅಭಿಮಾನಿ ಬಳಗಕ್ಕೆ ದುಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.
ಪೋಟೋಕ್ಯಾಪ್ಸನ್ ೧೪ ಇಂಡಿ೦೩_ ಕಾಂಗ್ರೆಸ್ ಹಿರಿಯ ಶಾಸಕ ಮಾಜಿ ಸಚಿವ ಶಾಮನೂರ ಶಿವಶಂಕರಪ್ಪ ಭಾವಚಿತ್ರ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ